
ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಧಾನ ಮಂತ್ರಿ ಆದರೆ 6 ತಿಂಗಳೊಳಗೆ ಪಾಕ್ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭರವಸೆ ನೀಡಿದ್ದಾರೆ…!
ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಯೋಗಿ, ಪಾಕಿಸ್ತಾನಕ್ಕೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಉಳಿಸುವುದು ಕಷ್ಟಕರವಾಗಿದೆ ಎಂದು ಹೇಳಿದರು…!!
ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿದ್ದೇ ಆದಲ್ಲಿ ಮುಂದಿನ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ ಎಂದ ಅವರು ಇಂತಹ ಕೆಲಸಕ್ಕೆ ಧೈರ್ಯ ಬೇಕು ಎಂದು ಹೇಳಿದರು…!
ನಾವು ನಮ್ಮ ಶತ್ರುಗಳನ್ನು ಪೂಜಿಸುವುದಿಲ್ಲ. ನಕ್ಸಲಿಸಂ ಮತ್ತು ಭಯೋತ್ಪಾದನೆ ವಿರುದ್ಧ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೃಢ ನಿಲುವನ್ನು ಹೊಂದಿದೆ. ಕಳೆದ 10 ವರ್ಷಗಳಲ್ಲಿ ನಾವು ನವ ಭಾರತವನ್ನು ಕಂಡಿದ್ದೇವೆ. ಗಡಿಗಳನ್ನು ಭದ್ರಪಡಿಸಲಾಗಿದೆ, ಭಯೋತ್ಪಾದನೆ ಮತ್ತು ನಕ್ಸಲಿಸಂ ನಿಗ್ರಹಿಸಲಾಗಿದೆ. ಮುಂಬೈ ಸ್ಫೋಟ ನಡೆದಾಗ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಭಯೋತ್ಪಾದಕರು ಗಡಿಯಾಚೆಯಿಂದ ಬಂದವರು ಎಂದು ಹೇಳುತ್ತಿತ್ತು. ಹಾಗಾದರೆ ನಮ್ಮ ಕ್ಷಿಪಣಿಯ ಉಪಯೋಗವೇನು? ಎಂದು ಯೋಗಿ ಆದಿತ್ಯನಾಥ್ ಪ್ರಶ್ನಿಸಿದ್ದಾರೆ…!!