
ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ…!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು…!!
ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ನೀಡಲಾಗಿದೆ, ಈಗ ಬಿಜೆಪಿ ನಾಯಕರು ಸಿಬಿಐ ತನಿಖೆಗೆ ನೀಡಬೇಕು ಅಂತ ಹೇಳುತ್ತಿದ್ದಾರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರಾ…? ನೇಹಾ ಹತ್ಯೆ ಪ್ರಕರಣದಲ್ಲಿ ಬಿಜೆಪಿಯವರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು…!
ನೇಹಾ ತಂದೆ ಹಾಗೂ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹೀರೇಮಠ್ ಅವರ ಮನೆಗೆ ಸಿಎಂ ಸಿದ್ಧರಾಮಯ್ಯ ಗುರುವಾರ ಭೇಟಿ ನೀಡಿದರು, ಈ ವೇಳೆ ನೇಹಾ ತಂದೆ ತಾಯಿ ನಿರಂಜನ ಹಿರೇಮಠ ತಾಯಿ ಗೀತಾರಿಗೆ ಸಿಎಂ ಸಾಂತ್ವನ ಹೇಳಿದರು…!!