
ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ(ಜೂ.24) ಆರಂಭವಾಗಲಿದೆ. ಜುಲೈ 3ರವರೆಗೆ ನಡೆಯಲಿದೆ.
18 ನೇ ಲೋಕಸಭೆಯಲ್ಲಿ, NDA 293 ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದೆ, ಆದರೆ ಬಿಜೆಪಿ 240 ಸ್ಥಾನಗಳನ್ನು ಹೊಂದಿದೆ. ಇಂಡಿಯಾ ಬ್ಲಾಕ್ 234 ಸ್ಥಾನಗಳನ್ನು ಹೊಂದಿದ್ದು,
NDA ಮೈತ್ರಿ ಕೂಟ ಸರಕಾರ ರಚಿಸಿದೆ, ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಇಂದು ಸದನದ ಕಲಾಪ ಪ್ರಾರಂಭವಾಗುವ ಮೊದಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು ಅವರು ಮಹತಾಬ್ ಅವರಿಗೆ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಬೋಧಿಸಲಿದ್ದಾರೆ.
ಜೂನ್ 28 ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯು ಸದನದಲ್ಲಿ ಭಾರೀ ಗದ್ದಲ-ಕೋಲಾಹಲಕ್ಕೆ ಕಾರಣವಾಗಬಹುದು.
NEET-UG ಮತ್ತು UGC-NET ಪರೀಕ್ಷೆಗಳು, ಹೊಸ ಕ್ರಿಮಿನಲ್ ಕಾನೂನುಗಳು ಮತ್ತು ಕಾಂಚನಜುಂಗಾ ಎಕ್ಸ್ಪ್ರೆಸ್ ಅಪಘಾತ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಮುಂದಾಗಿವೆ. ಸಿದ್ಧತೆ ಮಾಡಿಕೊಂಡಿವೆ.
ಅಧಿವೇಶನದ ಮೊದಲ ದಿನ, ಏಳು ಬಾರಿ ಸಂಸದರಾಗಿದ್ದ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಯನ್ನು ದಾಖಲಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ. ಹಿರಿತನದ ಆಧಾರದಲ್ಲಿ ಸಂಸದ ಕೆ.ಸುರೇಶ್ ಈ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ ಎಂದು ಕಾಂಗ್ರೆಸ್ ಹೇಳುತ್ತಿದೆ.
ಜುಲೈ 2 ಅಥವಾ 3 ರಂದು ಪ್ರಧಾನ ಮಂತ್ರಿಗಳು ಸದನದಲ್ಲಿ ಚರ್ಚೆಗೆ ಪ್ರತಿಕ್ರಿಯಿಸುವ ಸಾಧ್ಯತೆಯಿದೆ. ನಂತರ ಸಂಸತ್ ಕಲಾಪ ಅಲ್ಪ ವಿರಾಮ ಪಡೆದು ಜುಲೈ 22ರಂದು ಬಜೆಟ್ ಮಂಡನೆ ವೇಳೆ ಮತ್ತೆ ಸೇರಲಿದೆ.
ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರು ಹೊಸದಾಗಿ ಆಯ್ಕೆಯಾದ ಸಂಸದರ ಪಟ್ಟಿಯನ್ನು ಮೊದಲು ಮಂಡಿಸಲಿದ್ದಾರೆ. ಏಪ್ರಿಲ್ನಿಂದ ಜೂನ್ವರೆಗೆ ನಡೆದ ಸಾರ್ವತ್ರಿಕ ಚುನಾವಣೆಯ ನಂತರ ನಡೆಯುತ್ತಿರುವ ಮೊದಲ ಲೋಕಸಭೆ ಅಧಿವೇಶನ ಇದಾಗಿದೆ.
ಸೋಮವಾರದ ಮೊದಲ ದಿನದ ಅಧಿವೇಶನದಲ್ಲಿಮೋದಿ ಮತ್ತವರ ಸಂಪುಟ ಸದಸ್ಯರು ಸೇರಿದಂತೆ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂಗಳವಾರ 264 ಸದಸ್ಯರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.