
ದೇಶಾದ್ಯಂತ ಸದ್ದು ಮಾಡಿದ್ದ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಸೋಮವಾರಕ್ಕೆ ಅಂತ್ಯವಾಗಿದೆ…!
ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಇಂದು ಹಾಜರುಪಡಿಸಿದ್ದರು…!!
ಎಸ್ಐಟಿ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆ ಎಸ್ಐಟಿ ಅಧಿಕಾರಿಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು…!
ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ…!!
ಹೀಗಾಗಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ…!
ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ) ಸೇರಲಿದ್ದಾರೆ…!!