
ಬೆಂಗಳೂರು – ಬೆಂಗಳೂರಿನ ಬೀದಿ ಬೀದಿಗಳಲ್ಲಿ ರಾಶಿಗಟ್ಟಲೆ ಕಬ್ಬಿಣದ ಮೊಳೆಗಳನ್ನು ಬಿಸಾಡುವ ಮೂಲಕ ವಾಹನಗಳ ಟಯರ್ ಪಂಕ್ಚರ್ ಆಗುವಂತೆ ಮಾಡಿ ದುಡ್ಡು ಮಾಡುವ ಮಾಫಿಯಾ (ಪಂಕ್ಚರ್ ಮಾಫಿಯಾ) ಸಕ್ರಿಯವಾಗಿದೆಯೇ…? ಎಂಬ ಅನುಮಾನ ಮೂಡುತ್ತಿದೆ…!
ಬೆಂಗಳೂರಿನ ಜಾಲಹಳ್ಳಿಯ ಕುವೆಂಪು ಸರ್ಕಲ್ ನ ಕೆಳಸೇತುವೆಯಲ್ಲಿ ಮುಷ್ಟಿಗಟ್ಟಲೆ ಮೊಳೆಗಳು ಒಂದೆಡೆಯೇ ಪತ್ತೆಯಾಗಿದ್ದು, ಸ್ವತಃ ಟ್ರಾಫಿಕ್ ಪೊಲೀಸರೇ ಇವುಗಳನ್ನು ಸ್ಥಳದಿಂದ ಹೆಕ್ಕಿ ಕ್ಲೀನ್ ಮಾಡಿದ್ದಾರೆ…!!
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ…!
ರಸ್ತೆ ಮಧ್ಯದಲ್ಲಿ ಮೊಳೆಗಳನ್ನು ಎಸೆಯುವ ಮೂಲಕ ವಾಹನಗಳ ಪಂಕ್ಚರ್ ಮಾಡಿಸಲಾಗುತ್ತಿದೆ ಎಂಬ ವದಂತಿ ಮೊದಲಿನಿಂದಲೂ ಇತ್ತು…!!
ಇದೀಗ ಸ್ವತಃ ಟ್ರಾಫಿಕ್ ಪೊಲೀಸರಿಂದಲೇ ರಾಶಿಗಟ್ಟಲೆ ಮೊಳೆಗಳ ಸಂಗ್ರಹ ನಡೆದಿದ್ದು, ಅನುಮಾನ ಸಾಬೀತಾಗಿದೆ…!
ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ವಾಹನಗಳು ಪಂಕ್ಚರ್ ಆಗುತ್ತಿದ್ದು, ಸಮೀಪದಲ್ಲಿರುವ ಪಂಕ್ಚರ್ ಅಂಗಡಿಗಳಿಗೆ ಸಾಕಷ್ಟು ವ್ಯಾಪಾರವಂತೂ ಭರ್ಜರಿಯಾಗಿ ನಡೆಯುತ್ತಿದೆ…!
ನಿನ್ನೆ ಕುವೆಂಪು ಸರ್ಕಲ್ ನ ಅಂಡರ್ಪಾಸ್ನಲ್ಲಿ ರಾಶಿಗಟ್ಟಲೆ ಕಬ್ಬಿಣದ ಮೊಳೆಗಳನ್ನು ಪತ್ತೆಹಚ್ಚಿದ ಬೆಂಗಳೂರು ಟ್ರಾಫಿಕ್ ಪೊಲೀಸರು ಅವುಗಳನ್ನು ಹೆಕ್ಕುವ ಮೂಲಕ ಸ್ವಚ್ಛಗೊಳಿಸುವ ಕಾರ್ಯ ನಡೆಸಿದರು…!!
ಬೆಂಗಳೂರು ಟ್ರಾಫಿಕ್ ಪೊಲೀಸರು ಕುವೆಂಪು ಸರ್ಕಲ್ ಅಂಡರ್ಪಾಸ್ನಲ್ಲಿ ರಸ್ತೆಯನ್ನು ಗುಡಿಸುವ ವೀಡಿಯೊವನ್ನು ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಅದೀಗ ವೈರಲ್ ಆಗುತ್ತಿದೆ…!
ವೈರಲ್ ಆಗಿರುವ ವಿಡಿಯೋ ಪೋಸ್ಟ್ಗೆ ಬಹಳಷ್ಟು ಜನ ಪ್ರತಿಕ್ರಿಯೆ ನೀಡಿದ್ದಾರೆ…!
ಟ್ರಾಫಿಕ್ ಪೊಲೀಸರು ಮಾಡಿದ ಈ ಕೆಲಸವನ್ನು ಕೆಲವರು ಶ್ಲಾಘಿಸಿದ್ದಾರೆ…!!
ಜೊತೆಗೆ ತೊಂದರೆ ಸೃಷ್ಟಿಸಲು ಮೊಳೆ ಎಸೆದ ಅಪರಾಧಿಗಳನ್ನು ಖಂಡಿಸಿದ್ದಾರೆ…!
ಹೆಚ್ಚಿನ ವ್ಯಾಪಾರಕ್ಕಾಗಿ ಹತ್ತಿರದ ಪಂಕ್ಚರ್ವಾಲಾಗಳು ಈ ಕೆಲಸ ಮಾಡಿರಬಹುದು ಎಂದು ಕೆಲವು ಅನುಮಾನ ವ್ಯಕ್ತಪಡಿಸಿದ್ದಾರೆ…!