
ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನಗಳು ಮುಂದುವರೆಯುವ ಮುನ್ಸೂಚನೆ ಇದೆ…!
ಕಲ್ಯಾಣ ಕರ್ನಾಟಕ, ಸುಬ್ರಹ್ಮಣ್ಯ, ಮಲೆನಾಡು, ಕೊಡಗು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಮಿಂಚು, ಬಿರುಗಾಳಿ, ಆಲಿಕಲ್ಲು ಸಿಡಿಲಿನಿಂದ ಕೂಡಿದ ಮಳೆಯಾಗಿದೆ…!!
ಹವಾಮಾನ ಮುನ್ಸೂಚನೆ ಪ್ರಕಾರ ಮೂರ್ನಾಲ್ಕು ದಿನಗಳು ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ…!
ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ, ಕೆಲವೆಡೆ ಹಗುರವಾದ ಸಾಧಾರಣ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ…!!