
ರಾಜ್ಯದಲ್ಲಿ ನಿನ್ನೆ ಮಹಾನವಮಿಯ ದಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು ಬಿಸಿಲಿನ ಬೇಗೆಗೆ ಬಸವಳಿದ ಜನತೆಗೆ ಮಳೆರಾಯ ತಂಪೆರದಿದ್ದಾನೆ…!
ಬುಧವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗಿದೆ. ಚಿಕ್ಕಮಗಳೂರು, ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ…!!
ಏಪ್ರಿಲ್ 21ರವರೆಗೆ ರಾಜ್ಯದ ಹಲವೆಡೆ ಮಳೆ
ಏಪ್ರಿಲ್ 18 ರಿಂದ 21ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ…!
ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ
ಬೆಂಗಳೂರಿನಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಮುನ್ಸೂಚನೆ ಕೊಡಲಾಗಿದೆ…!!