
ರಾಜ್ಯ ಹಾಗೂ ದೇಶದ ಜನರು ಬಿಸಿಲಿನ ತಾಪಕ್ಕೆ ಬೇಸತ್ತು ಕಂಗಾಲಾಗಿ ಹೋಗಿದ್ದಾರೆ ಯಾವಾಗ ದೇವರೇ ಈ ಮಳೆಗಾಲ ಬರೋದು ಎಂದು ಕಾಯುತ್ತಿದ್ದಾರೆ .ಸೂರ್ಯನ ತಾಪಕ್ಕೆ ಗುಡ್ ಬೈ ಹೇಳುವ ಸಮಯ ಬರುತ್ತಿದೆ ವರುಣದೇವನ ಆಗಮಾನ..!
ಭಾರತೀಯ ಹವಾಮಾನ ಇಲಾಖೆ ಮುಂದಿನ 7 ದಿನಗಳಲ್ಲಿ ದೇಶದ ಕೆಲವು ರಾಜ್ಯಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಎಚ್ಚರಿಕೆಯು ಪೂರ್ವದಲ್ಲಿ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಭಾಗಗಳಿಂದ ದಕ್ಷಿಣದಲ್ಲಿ ತಮಿಳುನಾಡು ಮತ್ತು ಕರ್ನಾಟಕದವರೆಗೆ ವ್ಯಾಪಿಸಿದೆ.
ಇನ್ನು 7 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ 40-50 ಕಿಮೀ ವೇಗದಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತೆ ನಾಳೆ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ ಮತ್ತು ವಿಜಯನಗರದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.