
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ ಕೆಲವು ಜಿಲ್ಲೆಗಳಲ್ಲಿ ಎರಡು ಮೂರು ದಿನದಿಂದ ಭಾರಿ ಮಳೆ ಆಗುತ್ತಿದ್ದು.
ಇನ್ನು ಮುಂದಿನ 24 ಗಂಟೆಗಳ ತನಕ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಬಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗೆ ಇನ್ನು 4-5 ದಿನಗಳ ತನಕ ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜು.14ರಂದು ಒಳನಾಡಿನ ವಿವಿಧೆಡೆ ಗಾಳಿಯ ವೇಗವು 40-50 ವೇಗದಲ್ಲಿ ಬೀಸಲಿದ್ದು. ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರವಾಸಿಗರಿಗೆ ಸಮುದ್ರ ತೀರಕ್ಕೆ ಹೋಗದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಹಾಗೂ ನೆರೆ ನೀರು ನುಗುವ ತಗ್ಗು ಪ್ರದೇಶಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಸೂಚನೆಗಳನ್ನು ನೀಡಲಾಗಿದೆ.
ಶಿವಮೊಗ್ಗ ಚಿಕ್ಕಮಗಳೂರು ಕೊಡಗು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜಧಾನಿ ಬೆಂಗಳೂರು ಸೇರಿ ವಿಜಯಪುರ & ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ & ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮುಂಗಾರು ಮಳೆ ಅಬ್ಬರಿಸಲಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭರ್ಜರಿ ಮಳೆ ಆಗಲಿದೆಯಂತೆ. ಹೀಗಾಗಿ ಎಲ್ಲೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಗಣೇಶನಗರದಲ್ಲಿ ಭೂಕುಸಿತ ಉಂಟಾಗಿದೆ. ಮನೆಯ ಹಿಂಬದಿ ಭೂಮಿ ಕುಸಿಯುತ್ತಿರುವುದನ್ನು ಕಂಡು ನಿವಾಸಿಗಳು ಆತಂಕಗೊಂಡಿದ್ದಾರೆ.
ಹಾಗೂ ಕರಾವಳಿ ಜಿಲ್ಲೆಯ ನದಿಗಳ ನೀರಿನ ಮಟ್ಟ ಹೆಚ್ಚಾದ ಕಾರಣ ನದಿ ಪಾತ್ರದ ಜನರಿಗೆ ಮುಂಜಾಗ್ರತ ಕ್ರಮವಾಗಿ ಕೆಲವು ಸೂಚನೆಗಳನ್ನು ನೀಡಲಾಗಿದೆ.