
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಸ್ಟಡಿಯಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರೋಪಿಗಳನ್ನು ಒಬ್ಬೊಬ್ಬರನ್ನಾಗಿ, ಶೆಡ್ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಪೊಲೀಸರು ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ.
ಆರೋಪಿ ದರ್ಶನ್ ಅವರಿಗೆ ಆತ್ಮೀಯವಾಗಿರುವ ಆರೋಪಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದ ಎಂದು
ರೇಣುಕಾ ಸ್ವಾಮಿ ಅವರನ್ನು ಚಿತ್ರದುರ್ಗದಿಂದ ಕರೆತಂದು ಚಿತ್ರ ಹಿಂಸೆಗಳನ್ನು ಕೊಟ್ಟು ದರ್ಶನ್ ಅಂಡ್ ಗ್ಯಾಂಗ್ ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ
ಇನ್ನು ಆರೋಪಿ ದರ್ಶನ್ ಸ್ಥಳ ಮಹಜರು ವೇಳೆ ಅಮಾಯಕನಂತೆ ನಿಂತಿದ್ದದ್ದು ಕಂಡು ಬಂದಿದೆ.
ಪೊಲೀಸರ ಬಿಗಿ ಭದ್ರತೆಯಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಪೊಲೀಸರು ಕರೆದುಕೊಂಡು ಹೋಗಿದ್ದರು. ಪಟ್ಟಣಗೆರೆ ಶೆಡ್ ನಲ್ಲಿ ಇಂಚ್ ಇಂಚು ಪರಿಶೀಲನೆ ನಡೆಸಿ, ಮಾಹಿತಿ ಕಲೆಹಾಕಲಾಗಿದೆ.
ಮಹಜರಿನ ಜತೆಯಲ್ಲಿ ಸಾಕ್ಷ್ಯಗಳನ್ನು ಕೂಡ ಎಫ್ಎಸ್ಎಲ್ ತಂಡ ಕಲೆಹಾಕಿದೆ.
ಈ ಘಟನೆಯಲ್ಲಿ ಯಾರ ಪಾತ್ರ ಏನು ಯಾರು ಸ್ಥಳದಲ್ಲಿ ಇದ್ದರು ಎಂದು ಒಬ್ಬೊಬ್ಬರ ಬಳಿಯಿಂದ ಮಾಹಿತಿ ಪಡೆಯಲಾಗಿದೆ. ಸ್ಥಳ ಮಹಜರಿನ ಪ್ರತಿ ಹಂತದಲ್ಲಿ ವಿಡಿಯೊ ಸೆರೆಹಿಡಿಯಲಾಗಿದೆ.
ಇನ್ನು ರೇಣುಕಾ ಸ್ವಾಮಿಯ ಶವ ಸಾಗಿಸಲು ಬಳಸಲಾಗಿದೆ ಎನ್ನಲಾಗುತ್ತಿರುವ ಸ್ಕಾರ್ಪಿಯೋ ಕಾರು ಸೇರಿದಂತೆ ದರ್ಶನ್ ಬಳಸುತ್ತಿದ್ದ ಜೀಪ್ ರ್ವಾಂಗ್ಲರ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರುಗಳಿಂದ ಕೆಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಎರಡೂ ಕಾರುಗಳು ಸದ್ಯ ಪಶ್ಚಿಮ ವಿಭಾಗದ ಡಿಸಿಪಿ ಕಚೇರಿ ಬಳಿ ಇವೆ. ಬೆರಳಚ್ಚು ತಜ್ಞರು ಕಾರಿನಲ್ಲಿ ಬೆರಳಚ್ಚುಗಳ ಪ್ರತಿಯನ್ನು ತೆಗೆದುಕೊಳ್ಳಲಿದ್ದಾರೆ. ಶವವನ್ನು ಸಹ ಸಾಗಾಟ ಮಾಡಿರುವ ಕಾರಣ ಇನ್ನೂ ಕೆಲವು ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಸಲಿದ್ದಾರೆ.