
ದಾವಣಗೆರೆ – ಕಾಂಗ್ರೆಸ್ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಶುಕ್ರವಾರ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ…!
ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದಾವಣಗೆರೆ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆಲ ಹೊತ್ತು ಶಾಮನೂರು ಶಿವಶಂಕರಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ…!!
ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ವೈದ್ಯರು ಶಾಮನೂರು ಅವರಿಗೆ ಫೇಸ್ ಮೇಕರ್ ಅಳವಡಿಕೆ ಮಾಡಿದ್ದಾರೆ…!
ಶಾಮನೂರು ಶಿವಶಂಕರಪ್ಪ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ…!!