
2023 ರ ವಿಧಾನಸಭಾ ಚುನಾವಣೆಯಲ್ಲಿ ವಿ ಸೋಮಣ್ಣ ಅವರಿಗೆ ಬಿಜೆಪಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿತ್ತು
ಆದರೆ ಎರಡು ಕ್ಷೇತ್ರದಲ್ಲಿಯೂ ಸೋಮಣ್ಣ ಸೋತರು.
ನಂತರ ಸೋಮಣ್ಣ ಬಿಜೆಪಿ ನಾಯಕರ ಮೇಲೆ ಅಸಮಾಧಾನ ಗೊಂಡರು.
ಆದರೆ ಸೋಮಣ್ಣನಿಗೆ ಕೊಟ್ಟ ಭರವಸೆಯಂತೆ ಬಿಜೆಪಿ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿತು ಸೋಮಣ್ಣ ಭರ್ಜರಿ ಗೆಲುವನ್ನು ಸಾಧಿಸಿ ಲೋಕಸಭೆಗೆ ಪ್ರವೇಶ ಮಾಡಿದ್ದರು.
ಆದರೆ ಈ ಬಾರಿ ಕೇಂದ್ರದಲ್ಲಿ ಬಿಜೆಪಿ ಸ್ವಂತ ಬಹುಮತದಿಂದ ಅಧಿಕಾರಕ್ಕೆ ಬಾರದೇ ಇದ್ದರು NDA ಮೈತ್ರಿ ಕೂಟ ಸರಕಾರ ರಚಿಸಿತು.
ಎಲ್ಲಾ ಮಿತ್ರ ಪಕ್ಷಗಳಿಗೂ ಬಿಜೆಪಿ ಖಾತೆಗಳನ್ನು ಹಂಚಿಕೆ ಮಾಡಿದೆ.
ಹಾಗೆ ಕರ್ನಾಟಕದ ಐದು ಸಂಸದರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಒಲಿದು ಬಂದಿದೆ ಪ್ರಹ್ಲಾದ್ ಜೋಶಿ , ಶೋಭಾ ಕರಂದ್ಲಾಜೆ, ವಿ ಸೋಮಣ್ಣ, ನಿರ್ಮಲಾ ಸೀತಾರಾಮನ್, ಹಾಗೂ ಎಚ್ ಡಿ ಕುಮಾರಸ್ವಾಮಿ,
ತುಮಕೂರು ಸಂಸದ ವಿ. ಸೋಮಣ್ಣ ಅವರನ್ನು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾಗಿ ನೇಮಕ ಮಾಡಲಾಗಿದೆ. ಮಂಗಳವಾರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಕಛೇರಿ ಪೂಜೆ ಮಾಡಿದ ಬಳಿಕ ಜಗದ್ಗುರು ಬಸವಣ್ಣನವರ ಕಾಯಕವೇ ಕೈಲಾಸ ನುಡಿಮುತ್ತಿನಂತೆ, ಪೂಜ್ಯರಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳವರು ಹಾಗೂ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಆಶೀರ್ವಾದದೊಂದಿಗೆ ಅಧಿಕಾರ ಸ್ವೀಕಾರ ಮಾಡಿದರು.
ವಿ. ಸೋಮಣ್ಣ ಅಧಿಕಾರವಹಿಸಿಕೊಳ್ಳುವ ಸಂದರ್ಭದಲ್ಲಿ ಮಾಜಿ ಸಂಸ ಜಿ. ಎಸ್. ಬಸವರಾಜು, ಉಮೇಶ್ ಜಾಧವ್, ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ್ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.