
ಜೂನ್ 1 ರ ವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ ಸುಪ್ರೀಂ ಕೋರ್ಟ್…!
ಮಧ್ಯ ಹಗರಣದಲ್ಲಿ ಕಳೆದ ಮಾರ್ಚ್ 21 ರಿಂದ ಜೈಲು ವಾಸ ಅನುಭವಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ರಿಲೀಫ್ ಸಿಕ್ಕಿದೆ…!
ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ಮಧ್ಯಂತರ ಜಾಮೀನು ಮಂಜೂರು ಮಾಡಬೇಕು ಎಂದು ಕೇಜ್ರಿವಾಲ್ ಪರ ವಕೀಲರು ಹಲವು ಬಾರಿ ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು, ಆದರೆ ಹೈಕೋರ್ಟ್ ಕೇಜ್ರಿವಾಲ್ ಅವರ ಈ ಮನವಿಯನ್ನು ತಿರಸ್ಕರಿಸಿತ್ತು…!!
ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು…!
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಜೂನ್ 1 ರ ವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ…!!
ಆದರೆ ಕೆಲವೊಂದು ಷರತ್ತುಗಳನ್ನು ವಿಧಿಸಿರುವ ನ್ಯಾಯಾಲಯ ಕೇಜ್ರಿವಾಲ್ ಕೇವಲ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಬಹುದು, ಆದರೆ ಮುಖ್ಯಮಂತ್ರಿಯಾಗಿ ಅಧಿಕಾರ ಚಲಾಯಿಸುವಂತಿಲ್ಲ ಅರ್ಥಾತ್ ಯಾವುದೇ ಸರ್ಕಾರಿ ಕಡತಗಳಿಗೆ ಸಹಿ ಹಾಕುವಂತಿಲ್ಲ ಎಂದು ಹೇಳಿದೆ…!