
ಗುಜರಾತ್ನ ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ಭಾನುವಾರ ತಿರಸ್ಕೃತಗೊಂಡಿದೆ…!
ನಾಮಪತ್ರದಲ್ಲಿನ ಸಹಿಗಳು ತಮ್ಮದಲ್ಲ ಎಂದು ಮೂವರು ಸೂಚಕರು ಚುನಾವಣಾಧಿಕಾರಿಗಳಿಗೆ ಪ್ರಮಾಣ ಪತ್ರ ಸಲ್ಲಿಸಿದ ಬಳಿಕ ನಾಮಪತ್ರ ತಿರಸ್ಕರಿಸಲಾಗಿದೆ…!!
ನಾಮಪತ್ರಗಳಲ್ಲಿನ ಸೂಚಕರ ಸಹಿಯಲ್ಲಿ ವ್ಯತ್ಯಾಸಗಳಿದ್ದವು ಮತ್ತು ಅವು ನಿಜವಲ್ಲ ಎಂದು ತಿಳಿದುಬಂದಿದ್ದರಿಂದ ಕುಂಭಾನಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಸೌರಭ್ ಪರ್ಧಿ ಹೇಳಿದ್ದಾರೆ, ಇದರಿಂದಾಗಿ ಸೂರತ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಅಭ್ಯರ್ಥಿಯೇ ಕಣದಲ್ಲಿ ಇಲ್ಲದಂತಾಗಿದೆ…!
ಹೈಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ
ನಾಮಪತ್ರ ತಿರಸ್ಕ್ರತವಾಗಿದ್ದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದು ಬಿಜೆಪಿಯ ಸಂಚಾಗಿದ್ದು, ಅದರಂತೆ ಚುನಾವಣಾ ಆಯೋಗ ವರ್ತಿಸಿದೆ ಎಂದು ಹೇಳಿದೆ, ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಸೋಲು ಖಾತ್ರಿಯಾಗಿದ್ದು, ಹೀಗಾಗಿ ನಾಮಪತ್ರ ತಿರಸ್ಕಾರ ಮಾಡಿಸಿದೆ, ಜಿಲ್ಲಾ ಚುನಾವಣಾ ಅಧಿಕಾರಿ ವಿರುದ್ಧ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗುವುದು ಎಂದು ಕಿಡಿಕಾರಿದೆ…!