
ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಅವಧಿ ಮುಕ್ತಾಯವಾಗಿದೆ…!
14 ಕ್ಷೇತ್ರಗಳಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ಮುಕ್ತಾಯಗೊಂಡಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು – ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ – ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ, ಕ್ಷೇತ್ರಗಳಲ್ಲಿ ಮತದಾನ ನಡೆದಿದೆ…!!

247 ಅಭ್ಯರ್ಥಿಗಳ ಭವಿಷ್ಯ ಇವಿಎಂ ಸೇರಿದೆ. ರಾಜ್ಯದಲ್ಲಿ ಮೊದಲ ಹಂತ ಮತ್ತು ದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ಇಂದು ನಡೆದಿದೆ. ಜೂನ್ 4ರ ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ…!