
ಬಾಲಿವುಡ್ ನಟ ಆಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್’ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ…!
ಇದರಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳಿವೆ ಎಂಬುದಾಗಿ ಹಿಂದೂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಗುಜರಾತ್ ಹೈಕೋರ್ಟ್, ಜುನೈದ್ ಖಾನ್ ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್’ ಬಿಡುಗಡೆಗೆ ತಡೆಯಾಜ್ಞೆಯನ್ನು ನೀಡಿದೆ…!!
ಇದರಿಂದ ಅಮೀರ್ ಖಾನ್ ಹಾಗೂ ಜುನೈದ್ ಖಾನ್ಗೆ ಹಿನ್ನಡೆಯಾಗಿದೆ…!
ಸಿದ್ಧಾರ್ಥ್ ಪಿ ಮಲ್ಹೋತ್ರಾ ಅವರು ಮಹಾರಾಜ್ ಸಿನಿಮಾವನ್ನು ನಿರ್ದೇಶಿಸಿದ್ದರೆ, ಆದಿತ್ಯ ಚೋಪ್ರಾ ನಿರ್ಮಾಪಕರಾಗಿದ್ದಾರೆ…!!
ಇವತ್ತು ನೆಟ್ಫ್ಲಿಕ್ಸ್ನಲ್ಲಿ ಸಿನಿಮಾ ರಿಲೀಸ್ ಆಗಬೇಕಿತ್ತು…!
ಆದರೆ ವಿವಿಧ ಹಿಂದೂ ಸಂಘಟನೆಗಳು ಸಿನಿಮಾದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಕೋರ್ಟ್ ಮೆಟ್ಟಿಲು ಏರಿದ್ದರು…!!
ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳು ಸಿನಿಮಾದಲ್ಲಿವೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ ಕಾರಣ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಲಾಗಿದೆ…!
ಸಾಮಾಜಿಕ ಜಾಲತಾಣಗಳಲ್ಲಿಯೂ ಸಿನಿಮಾದ ವಿರುದ್ಧ ಬಾಯ್ಕಾಟ್ ಅಭಿಯಾನ ನಡೆಯುತ್ತಿದೆ…!!