
ಉಡುಪಿ: ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತ ಗೊಂಡಿದೆ ಕರಾವಳಿ ಹಾಗೂ ಒಳನಾಡಿನ ಕೊಡಗು, ಹಾಸನ ಚಿಕ್ಕಮಗಳೂರು ಹಾಗೂ ಶಿವಮೊಗ್ಗಕ್ಕೆ ಹಾಗೂ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯದಲ್ಲಿ ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ.
ದಕ್ಷಿಣ ಕನ್ನಡಕ್ಕೆ ಅತ್ಯಂತ ಭಾರೀ ಮಳೆಯ ಮುನ್ಸೂಚನೆ ಇದ್ದು, ಗುಡ್ಡ ಪ್ರದೇಶದ ಮನೆಗಳಲ್ಲಿ ಇರುವವರು, ಘಾಟಿಗಳಲ್ಲಿ ಸಂಚರಿಸುವವರು, ಹಾಗೂ ನದಿ ತೀರದ ಜನರು ಎಚ್ಚರದಿಂದ ಇರುವಂತೆ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಆಗಸ್ಟ್ 1 ರಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ . ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳಿಗೂ ಎರಡು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣದಿಂದ ಭಾರತೀಯ ಹವಾಮಾನ ಇಲಾಖೆ ಸೂಚನೆಯಂತೆ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ , ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 1 ರಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.