
ಈ ಬಾರಿ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ, ನಾಗಪುರ ರೇಶಿಂಬಾಗ್ನ ಡಾ.ಹೆಡಗೇವಾರ್ ಸ್ಮೃತಿ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕರ್ತ ವಿಕಾಸ ವರ್ಗ-ದ್ವಿತೀಯದ ಸಮಾರೋಪ ಕಾರ್ಯಕ್ರಮದಲ್ಲಿ ಆರ್ಎಸ್ಎಸ್ ಪ್ರಶಿಕ್ಷಣಾರ್ಥಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬಿಜೆಪಿ ವಿರುದ್ಧ ನೀಡಿದ ಹೇಳಿಕೆ ದೇಶಾದ್ಯಂತ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು…!
ಇದಾದ ನಂತರ ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿ
ಯೋಗಿ ಆದಿತ್ಯನಾಥ್ ಇಂದು ಮೋಹನ್ ಭಗವತ್ ಅವರನ್ನು ಗೋರಕ್ ಪುರದಲ್ಲಿ ಭೇಟಿ ಮಾಡಿದ್ದಾರೆ…!!
ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಇವರಿಬ್ಬರ ಭೇಟಿ ರಾಜಕೀಯವಾಗಿ ಮಹತ್ವ ಪಡೆಯಲಿದೆ…!
ಇಬ್ಬರ ನಡುವೆ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಯುಪಿಯಲ್ಲಿ ಆರ್ ಎಸ್ ಎಸ್ ವಿಸ್ತರಣೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ…!!
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿಲ್ಲ 2019 ರ ಚುನಾವಣೆಯಲ್ಲಿ 303 ಸ್ಥಾನ ಗೆದ್ದು ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರ ಹಿಡಿದಿತ್ತು…!
ಆದರೆ ಈ ಬಾರಿ ಬಿಜೆಪಿ 400ರ ಗಡಿ ದಾಟುವ ನಿರೀಕ್ಷೆ ಇಟ್ಟಿತ್ತು…!!
ಆದರೆ ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಕೇವಲ 240 ಸ್ಥಾನಗಳು…!
ಹಾಗಾಗಿ ಈ ಬಾರಿ ಸ್ವಂತ ಬಲದಿಂದ ಬಿಜೆಪಿಗೆ ಸರಕಾರ ರಚಿಸಲು ಸಾಧ್ಯವಾಗಲಿಲ್ಲ ಮಿತ್ರ ಪಕ್ಷಗಳ ಜೊತೆ ಸೇರಿ NDA ಸರಕಾರ ಬಿಜೆಪಿ ರಚಿಸಿದೆ…!!
ಉತ್ತರ ಪ್ರದೇಶದ ಒಟ್ಟು 80 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ 33 ಸ್ಥಾನಗಳನ್ನು ಮಾತ್ರ ಗೆದ್ದಿದೆ…!
ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಪಕ್ಷ ಮತ್ತು ಸಮಾಜವಾದಿ ಪಕ್ಷ 42 ಸ್ಥಾನಗಳನ್ನು ಗೆದ್ದಿದೆ. ಅಷ್ಟೇ ಅಲ್ಲ, ಈ ಬಾರಿಯ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಪ್ರಮುಖ ನಾಯಕರು ಅತಿಯಾದ ವಿಶ್ವಾಸದಿಂದ ಪ್ರಚಾರ ನಡೆಸಿದ್ದರು…!!
ಇನ್ನೊಂದೆಡೆ ಕಳೆದ ಚುನಾವಣೆಯಲ್ಲಿ ಯುಪಿಯಲ್ಲಿ ಬಿಜೆಪಿ 62 ಎಂಪಿ ಸ್ಥಾನಗಳನ್ನು ಗೆದ್ದುಕೊಂಡಿದ್ದು ಗೊತ್ತೇ ಇದೆ…!
ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿಗೆ ಹಿನ್ನಡೆಯಾಗಲು ಕಾರಣಗಳೇನು ಇಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ನಾಯಕರು ಚರ್ಚೆ ನಡೆಸುತ್ತಿರುವಾಗಲೇ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ್ದ ಹೇಳಿಕೆ ಚರ್ಚೆಗೆ ಗ್ರಾಸ ಒದಗಿಸಿತ್ತು…!!
ಇನ್ನು ಯೋಗಿ ಹಾಗೂ ಮೋಹನ್ ಭಾಗವತ್ ಅವರ ಬೇಟಿಯ ನಂತರ ಏನೇನು ಚರ್ಚೆಗಳು ಆಗಲಿದೆ ಎನ್ನುವುದು ಕಾದುನೋಡಬೇಕಿದೆ…!