
ನಾಳೆಯಿಂದ ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಒಟ್ಟು ಏಳು ಹಂತಗಳ ಪೈಕಿ ಮೊದಲ ಹಂತದಲ್ಲಿ 17 ರಾಜ್ಯಗಳು ಹಾಗೂ 4 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ…!
ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್ ಗಢ, ಬಿಹಾರ, ರಾಜಸ್ಥಾನ, ಪಶ್ಚಿಮ ಬಂಗಾಳ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ತ್ರಿಪುರಾ, ಲಕ್ಷದ್ವೀಪ, ಅಂಡಮಾನ್ ನಿಕೋಬಾರ್, ಉತ್ತರಾಖಂಡ, ನಾಗಾಲ್ಯಾಂಡ್, ಮಿಜೋರಾಂ, ಸಿಕ್ಕಿಂ, ಮೇಘಾಲಯ, ಮಣಿಪುರ, ಅರುಣಾಚಲ ಪ್ರದೇಶ, ಪುದುಚೇರಿ ಹಾಗೂ ತಮಿಳುನಾಡು ಮತದಾನ ನಡೆಯುವ ಪ್ರಮುಖ ರಾಜ್ಯಗಳು…!!
ಅದರಲ್ಲಿ ತಮಿಳುನಾಡಿನ ಎಲ್ಲಾ 39 ಕ್ಷೇತ್ರಗಳಿಗೆ ನಾಳೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ…!
ಮತದಾನಕ್ಕೆ ಚುನಾವಣಾ ಆಯೋಗ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ನಡೆಸಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ…!!
ಎಲ್ಲಾ 7 ಹಂತಗಳ ಮತದಾನ ಮುಗಿದ ಬಳಿಕ ಜೂನ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ…!
ನಾಳಿನ ಚುನಾವಣೆಯಲ್ಲಿ ಕಣದಲ್ಲಿರುವ ಪ್ರಮುಖರು
1) ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ
2) ಕೇಂದ್ರ ಸಚಿವ ಎಲ್ ಮುರುಗನ್
3) ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ
4) ಅಸ್ಸಾಂ ಮಾಜಿ ಸಿಎಂ ಸರ್ಬಾನಂದ ಸೋನೊವಾಲ್
5) ನಾಗ್ಪುರದಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ
6) ಕೇಂದ್ರ ಸಚಿವ ಕಿರಣ್ ರಿಜೀಜು
7) ಜಮ್ಮುಕಾಶ್ಮೀರದ ಉದಂಪುರದಿಂದ ಕೇಂದ್ರ ಸಚಿವ ಜಿತೇಂದ್ರ ಸಿಂಗ್
8) ಮಾಜಿ ಗವರ್ನರ್ ತಮಿಳುಸಾಯಿ ಸೌಂದರರಾಜನ್