
ರಾಮನಗರ ಜಿಲ್ಲೆಗೆ “ಬೆಂಗಳೂರು ದಕ್ಷಿಣ” ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಟೀಕಿಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು, ತಾವು ಮತ್ತೊಮ್ಮೆ ಸಿಎಂ ಆಗುವ ಸಂದರ್ಭದಲ್ಲಿ ಇದನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ…!
ನಾವು ಅಧಿಕಾರಕ್ಕೆ ಬರಲಿದ್ದೇವೆ, ಮತ್ತು ನಾನು ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದು ನನಗೆ ವಿಶ್ವಾಸವಿದೆ, ಅದು ಸಂಭವಿಸಿದ ನಂತರ, ಜಿಲ್ಲೆಯ ಮೂಲ ಹೆಸರು ರಾಮನಗರವನ್ನು ಮರಳಿ ತರುವೆ ಎಂದು ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಹೇಳಿದರು…!!
2007ರಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿಕೂಟದ ನೇತೃತ್ವದ ಸರ್ಕಾರದಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದ ಮೊದಲ ಅವಧಿಯಲ್ಲಿ ರಾಮನಗರ, ಜಿಲ್ಲೆಯಾಗಿ ರೂಪುಗೊಂಡಿತ್ತು…!
ರಾಮನಗರಕ್ಕೆ ‘ಬೆಂಗಳೂರು ದಕ್ಷಿಣ’ ಎಂದು ಹೆಸರಿಟ್ಟರೆ ರಾಮನಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಕೇಂದ್ರ ಸಚಿವರು ಅಭಿಪ್ರಾಯಪಟ್ಟಿದ್ದಾರೆ…!!
‘ರಾಮನಗರ’ ಎಂಬ ಹೆಸರು ಐತಿಹಾಸಿಕ ಮಹತ್ವವನ್ನು ಹೊಂದಿದೆ, ಜಿಲ್ಲೆಯ ಹೆಸರನ್ನು ಬದಲಾಯಿಸುವುದರಿಂದ ಅದರ ನಿವಾಸಿಗಳಿಗೆ ಹೇಗೆ ಲಾಭವಾಗುತ್ತದೆ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು…!
ಸರ್ಕಾರ ಹೆಸರು ಬದಲಿಸುವ ಬದಲು ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಬೇಕು’ ಎಂದು ಕುಮಾರಸ್ವಾಮಿ ಹೇಳಿದರು...!!
ತಾವು ಸಿಎಂ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಸಂಪೂರ್ಣ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ರಾಮನಗರವನ್ನು ಜಿಲ್ಲೆಯನ್ನಾಗಿ ರೂಪುಗೊಳಿಸಲಾಯಿತು, ಎಂದು ತಿಳಿಸಿದ ಕುಮಾರಸ್ವಾಮಿ, ಮರುನಾಮಕರಣ ಮಾಡುವುದರಿಂದ ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ತೊಂದರೆಯಾಗುತ್ತದೆ ಎಂದರು…!